



ಕೊಚ್ಚಿ: ಇಲ್ಲಿನ ವಿಮಾನ ನಿಲ್ದಾಣದಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲಿ ಮತ್ತೇ ಕೊಚ್ಚಿಗೆ ವಾಪಸಾಗಿದೆ.
ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆದ ಕೂಡಲೇ ವಿಮಾನ ಪ್ರಯಾಣಿಕರೊಬ್ಬರಿಗೆ ಸುಟ್ಟ ವಾಸನೆ ಬಂದಿತ್ತು, ಅವರು ತಕ್ಷಣವೇ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ತಕ್ಷಣ ವಿಮಾನವನ್ನು ಭೂಸ್ಪರ್ಶ ಮಾಡಿಸಲಾಯಿತು.
ಬುಧವಾರ ತಡರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ವಿಮಾನವನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ದೋಷ ಕಂಡುಬಂದಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ಪ್ರಯಾಣಿಕರಿಗಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಿತ್ತು, ಅದು ಸುಮಾರು 175 ಪ್ರಯಾಣಿಕರನ್ನು ಹೊತ್ತು ತಡವಾಗಿ ಶಾರ್ಜಾಕ್ಕೆ ಹೊರಟಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.