



ಬೆಂಗಳೂರು; ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ದಾಖಲೆ ಮಟ್ಟದ 6210 ಅರ್ಜಿಗಳ ಅರ್ಜಿ ಸಲ್ಲಿಕೆ ಯಾಗಿದ್ದು ಆನ್ ಲೈನ್ ಹಾಗೂ ಆಫ್ ಲೈನ್ ಎರಡರಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದರಿಂದ 28.857 ಜನರು ಆನ್ ಲೈನ್ ಮೂಲಕ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದಾರೆ ..ಕಳೆದ 3 ವರ್ಷಗಳ ಪೈಕಿ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಜನರ ಸ್ಪಂದನೆ ಹೆಚ್ಚಾಗಿದೆ. ಸೇವಾಸಿಂಧು ಮೂಲಕ ಸಾಧಕರನ್ನು ಗುರುತಿಸುವ ಅವಕಾಶಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, 2021-22 ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 6210 ಅರ್ಜಿಗಳ ಸಲ್ಲಿಕೆಯಾಗಿವೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕವಾಗಿ 1450 ಅರ್ಜಿಗಳು ಹಾಗೂ `ಸೇವಾ ಸಿಂಧು' ಮೂಲಕ 4770 ಹೆಸರುಗಳು ಬಂದಿದ್ದು ಅವುಗಳನ್ನು 28,857 ಜನರು ಆನ್ಲೈನ್ ಮೂಲಕ ಶಿಫಾರಸ್ಸು ಮಾಡಿದ್ದಾರೆ. ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಸಾಧಕರ ಅರ್ಜಿಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಆನ್‌ಲೈನ್ ಪ್ರಯೋಗ ಇದೇ ಮೊದಲ ಬಾರಿಗೆ ಮಾಡಲಾಗಿದ್ದು,ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶಿಸಬಹುದಾಗಿದೆ, ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಗಳ ಹೆಸರನ್ನು ಕಳುಹಿಸಲು ಅಕ್ಟೋಬರ್ 15 ನೇ ತಾರೀಖಿನವರೆಗೂ ಅವಕಾಶ ಕಲ್ಪಿಸಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.