



ಕಾರ್ಕಳ:
ಶಾಲಾ ವಾಹನಕ್ಕೆ ಕಾರೊಂದು ಬುಧವಾರ ಸಂಜೆ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಕಾರ್ಕಳ ತೆಳ್ಳಾರು ನಿವಾಸಿ 40ವರ್ಷದ ರಾಜೇಶ್ ಆಚಾರ್ಯ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮೂಡುಬಿದಿರೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಅಲಂಗಾರಿನಲ್ಲಿ ಬುಧವಾರ ಸಂಜೆ ಅಪಘಾತ ಸಂಭವಿಸಿದ್ದು ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದರು ಮೂಡುಬಿದಿರೆ ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದು, ಇದರ ಪರಿಣಾಮ ಶಾಲಾ ವಾಹನದ ಚಾಲಕ ಎಡ ಕಡೆಗೆ ವಾಹನವನ್ನು ತಿರುಗಿಸಿದ್ದು, ಆಗ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ನಿಂತಾಗ ಕಾರು ಅಲ್ಲಿಗೆ ಬಂದು ಗುದ್ದಿದೆ. ಇನ್ನು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ದೀಪಕ್ ಆಚಾರ್ಯ ಅವರಿಗೂ ಗಾಯಗಳಾಗಿದೆ. ಶಾಲಾ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.