



ಶ್ರೀನಗರ: ವಾರದ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ಯೋಧನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ನಾಪತ್ತೆಯಾಗಿದ್ದ ಯೋಧನನ್ನು ವಶಪಡಿಸಿಕೊಂಡಿರುವ ಪೊಲೀಸರು ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ ಆತಂಕವಿತ್ತು. ಆದರೆ ಯಾವುದೇ ಉಗ್ರಗಾಮಿ ಸಂಘಟನೆಗಳು ಅವರ ಅಪಹರಣದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ.
ಲಡಾಖ್‍ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಜು.29ರ ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದರು. ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯಾಗಿತ್ತು ಇದರಿಂದ ಇನ್ನೂ ಆತಂಕ ಹೆಚ್ಚಾಗಿತ್ತು. ಹುಡುಕಾಟ ನಡೆಸುವಂತೆ ಆತನ ಕುಟುಂಬ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.