



ಮೈಸೂರು: ಖೋಖೋ ಆಟದ ವೇಳೆ ವಿದ್ಯಾರ್ಥಿಯೊರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಶಾಂಕ್(13) ಮೃತ ವಿದ್ಯಾರ್ಥಿ. ಗ್ರಾಮದ ಎಚ್. ಎಸ್ ಪಾಪಣ್ಣ ಮತ್ತು ಕುಮಾರಿ ದಂಪತಿ ಪುತ್ರನಾದ ಮೃತ ಶಶಾಂಕ್ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಇನ್ನು ಶಾಲಾ ಅವಧಿ ಮುಗಿದ ನಂತರ ವಿದ್ಯಾರ್ಥಿಗಳು ಖೋಖೋ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಶಶಾಂಕ್ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನ ಹೆಚ್.ಡಿ ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಸಾವನ್ನಪ್ಪಿದ್ದಾನೆ.
ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.