logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿಯಲ್ಲಿ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
7 Aug 2026
post image

ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತರನ್ನು ಸದಾನಂದ ನಾಯಕ್(55) ಎಂದು ಗುರುತಿಸಲಾಗಿದೆ.

ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಮೃತದೇಹ ಕಾರಿನೊಳಗೆ ಸಿಲುಕಿಕೊಂಡಿದೆ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿದ್ದು, ಕಾರಿನ ಮೇಲಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ಮರ ತೆರವುಗೊಳಿಸಿದ ಬಳಿಕವಷ್ಟೇ ಮೃತದೇಹವನ್ನು ಕಾರಿನಿಂದ ಹೊರತೆಗೆಯಲು ಸಾಧ್ಯವಾಗಲಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.