logo
WhatsApp Image 2026-04-02 at 14.46.04.jpeg
hindalco everlast.jpeg

ಕ್ಷುಲ್ಲಕ ಕಾರಣಕ್ಕೆ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ

ಟ್ರೆಂಡಿಂಗ್
share whatsappshare facebookshare telegram
19 Sept 2023
post image

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಪತ್ನಿ ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಹಮ್ಮದ್ ಆಸಿಫ್ ಗಾಯಗೊಂಡವರಾಗಿದ್ದು ಇವರ ಪತ್ನಿ ಮಣಿಪುರ ಗ್ರಾಮದ ಗುಜ್ಜಿ ನಿವಾಸಿ ಹುಸೈನ್ ಎಂಬವರ ಪುತ್ರಿ ಅಫ್ರೀನ್ ಕೃತ್ಯ ಎಸಗಿದ ಆರೋಪಿಯಾಗಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಅಫ್ರೀನ್ ಅವರು ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳೆನ್ನಲಾಗಿದೆ. ಸೆ.೧୭ ರಂದು ಸಂಜೆ ಆಸಿಫ್ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಆಸಿಫ್ ಅವರು ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.