logo
WhatsApp Image 2026-04-02 at 14.46.04.jpeg
hindalco everlast.jpeg

ಉಪ್ಪೂರಿನಲ್ಲಿ ವೃದ್ಧೆಯ ಆರೋಗ್ಯ ವಿಚಾರಿಸಲು ಬಂದಿದ್ದ ಮಹಿಳೆ ಕುಸಿದುಬಿದ್ದು ಸಾವು

ಟ್ರೆಂಡಿಂಗ್
share whatsappshare facebookshare telegram
28 Aug 2022
post image

ಬ್ರಹ್ಮಾವರ:

ವೃದ್ಧೆಯ ಆರೋಗ್ಯ ವಿಚಾರಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಉಪ್ಪೂರು ತೆಂಕಬೆಟ್ಟುವಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. 62ವರ್ಷದ ಸುಲೋಚನವ್ವ ಮೃತದುರ್ದೈವಿ. ಇವರು ತೆಂಕಬೆಟ್ಟುವಿನ ಅಖಿಲ್‌ ಶೆಡ್ತಿಯವರ ಮನೆಯಲ್ಲಿ ಈ ಹಿಂದ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಅಖಿಲ್‌ ಶೆಟ್ಟಿಯವರ ತಾಯಿ ಆರೋಗ್ಯ ವಿಚಾರಿಸಲು ಬಂದಿದ್ದು, ರಾತ್ರಿ ಅಲ್ಲಿಯೇ ತಂಗಿದ್ದರು. ಬೆಳಿಗ್ಗೆ ಶೌಚಾಲಯಕ್ಕೆ ಹೋದವರು ಆಯತಪ್ಪಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು  ಬ್ರಹ್ಮಾವರದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಸುಲೋಚನವ್ವ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.