logo
WhatsApp Image 2026-04-02 at 14.46.04.jpeg
hindalco everlast.jpeg

ಇಲಿ ಪಾಷಾಣ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಟ್ರೆಂಡಿಂಗ್
share whatsappshare facebookshare telegram
7 Aug 2022
post image

ಕೋಟ:

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ‌ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೋಟದಲ್ಲಿ ನಡೆದಿದೆ. ಕೋಟ ನಿವಾಸಿ 67 ವರ್ಷದ ರತ್ನ ಮೃತದುರ್ದೈವಿ. ಇವರು ಸುಮಾರು 20 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಆ. 1ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದು, ಕೂಡಲೇ  ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ  ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರತ್ನ ಅವರು ಚಿಕಿತ್ಸೆ ಫಲಕಾರಿಯಾಗದೆ ಆ.5ರಂದು ರಾತ್ರಿ ಮೃತಪಟ್ಟಿದ್ದಾರೆ.. ಈ ಬಗ್ಗೆ ಕೋಟ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.