logo
WhatsApp Image 2026-04-02 at 14.46.04.jpeg
hindalco everlast.jpeg

ಹಾವಂಜೆ ದೇವಸ್ಥಾನಬೆಟ್ಟುವಿನಲ್ಲಿ ನಿದ್ರಾ ಹೀನಾತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
25 Aug 2022
post image

ಶಂಕರನಾರಾಯಣ: ನಿದ್ರಾ ಹೀನಾತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ. ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು 36ವರ್ಷ ಪ್ರಾಯದ ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾ ಹೀನಾತೆಯಿಂದ ಬಳಲುತ್ತಿದ್ದು, ಹಿರಿಯಡ್ಕ ಹಾಗೂ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಆರೋಗ್ಯ ಸುಧಾರಿಸಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಬೇಸತ್ತು ಆ. 24ರ ರಾತ್ರಿಯಿಂದ ಆ.25ರ ಬೆಳಗಿನ ಜಾವ 3ಗಂಟೆಯ ಮದ್ಯದಾವಧಿಯಲ್ಲಿ ಮನೆಯ ಹತ್ತಿರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ      ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.