



ಬೆಹ್ರಾಂಪುರ್(ಒಡಿಶಾ): ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಿದ್ದ 20 ವರ್ಷದ ಯುವಕ ಕುಸಿದು ಬಿದ್ದು ಕೊನೆಯುಸಿರೆಳೆದಿರುವ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಅಧಿಕಾರಿಗಳು ಶನಿವಾರ (ಮಾರ್ಚ್ 25) ತಿಳಿಸಿದ್ದಾರೆ. ಮೃತ ಯುವಕನನ್ನು ದೀಪ್ತಿ ರಂಜನ್ ದಾಸ್ ಎಂದು ಗುರುತಿಸಲಾಗಿದೆ. ಈತ ಗಂಜಾಮ್ ಜಿಲ್ಲೆಯ ಶ್ಯಾಮ್ ಸುಂದರ್ ಪುರ್ ಪ್ರದೇಶದ ನಿವಾಸಿ. ಛಾತ್ರಾಪುರ್ ಪೊಲೀಸ್ ರಿಸರ್ವ್ ಮೈದಾನದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ನಡೆದ ದೈಹಿಕ ಪರೀಕ್ಷೆಯಲ್ಲಿ ದಾಸ್ 1,600 ಮೀಟರ್ ಓಟದಲ್ಲಿ ಭಾಗವಹಿಸಿದ್ದು, ಏತನ್ಮಧ್ಯೆ ಕುಸಿದು ಬಿದ್ದು ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ.
ಕುಸಿದು ಬಿದ್ದ ಯುವಕನನ್ನು ಕೂಡಲೇ ಛಾತ್ರಾಪುರ್ ಸಬ್ ಡಿವಿಶನಲ್ ಆಸ್ಪತ್ರೆಗೆ ನಂತರ ಎಂಕೆಸಿಜಿ ಮೆಡಿಕಲ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲೇ ದಾಸ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ಗಂಜಾಮ್ ಪೊಲೀಸ್ ವರಿಷ್ಠಾಧಿಕಾರಿ ಜಗ್ ಮೋಹನ್ ಮೀನಾ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.