



ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ಕಾಲು ಜಾರಿ ಮನೆಯ ಕೆರೆಗೆ ಬಿದ್ದು ಯುವಕರುನೋರ್ವ ಮೃತಪಟ್ಟ ಧಾರುಣ ಘಟನೆ ನಡೆದಿದೆ.
ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರು ಕೃಷಿ ವೃತ್ತಿ ಮಾಡುತ್ತಿದ್ದರು. ತಮ್ಮ ಮನೆಯ ಕೆರೆಗೆ ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ, ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.