logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ವಿದ್ಯಾರ್ಥಿನಿ ಜತೆ ಮಾತನಾಡಿದಕ್ಕೆ ಯುವಕನಿಗೆ ಹಲ್ಲೆ ,ಮೂವರ ಬಂಧನ

ಟ್ರೆಂಡಿಂಗ್
share whatsappshare facebookshare telegram
24 Aug 2023
post image

ಬೆಂಗಳೂರು ಬಸ್‌ ಹತ್ತಲು ಬಂದಿದ್ದ ಯುವತಿಯ ಜೊತೆಗೆ ಅನ್ಯಕೋಮಿನ ಯುವಕ ಮಾತನಾಡಿದ ಎಂಬ ಕಾರಣಕ್ಕೆ ಮೂವರು ಯುವಕರ ತಂಡ ವಿದ್ಯಾರ್ಥಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು(Police)ಮೂವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಪ್ರಕರಣ ನಡೆದಿರುವ ಕುರಿತು ವರದಿಯಾಗಿದೆ. ಹಿಂದು ವಿದ್ಯಾರ್ಥಿನಿಯೊಬ್ಬಳ ಜತೆ ಮಾತನಾಡಿದ ಎಂಬ ಕಾರಣಕ್ಕೆ ಯುವಕರು ಮುಸ್ಲಿಂ ಯುವಕನ (Attack on Muslim youth) ಮೇಲೆ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ. ಪೊಲೀಸರು ಘಟನೆ ನಡೆದ ಕೂಡಲೇ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್‌ 22ರಂದು ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿಗೆ ಹೋಗಲು ಬಸ್‌ ನಿಲ್ದಾಣಕ್ಕೆ ಬಂದಿದ್ದಾಳೆ. ಅದೇ ಸಮಯಕ್ಕೆ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿಯೊಬ್ಬ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯ ಕೆಲವರು ಯುವಕರು ಉಳಿದವರಿಗೆ ಮಾಹಿತಿ ನೀಡಿದ್ದು, ಯುವತಿ ಬಸ್‌ ಹತ್ತುತ್ತಿದ್ದಂತೆ ಯುವಕರ ತಂಡವೊಂದು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದೆ.

ಹಿಂದು ಯುವತಿಯ ಜೊತೆಗೆ ನಿನಗೇನು ಕೆಲಸ ಎಂದು ಪ್ರಶ್ನಿಸಿ ಯುವಕರ ತಂಡ ಹಲ್ಲೆ ಮಾಡಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಘಟನೆ ನಡೆದ ದಿನವೇ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಮೂಡಬಿದ್ರೆಯ (Moral Policing at Moodabidri) ರಾಜೀವ್‌ ಗಾಂಧಿ ಸಂಕೀರ್ಣದ ಎದುರು ನಡೆದ ಘಟನೆಯ ಕುರಿತಂತೆ ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಎಂಬ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.