



ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಂತಹ ಘಟನೆಯೊಂದು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ಅಕ್ಟೋಬರ್.11 ರಂದು ನಡೆದಿದೆ.
ಆತ್ಮಹತ್ಯೆಯನ್ನು ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿಯಾದ ಬಾಬು ನಾಯ್ಕರವರ ಮಗಳು ನಿಶ್ಮಿತಾ(22) ಎಂಬುದಾಗಿ ಗುರುತಿಸಲಾಗಿದೆ.
ನಿಶ್ಮಿತಾರವರು ಡೆಂಟಲ್ ಕ್ಲಿನಿಕ್‌ನಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಈಕೆ ಕಾಣೆಯಾಗಿದ್ದಳು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆಯ ಬಗ್ಗೆ ಪ್ರಕರಣವು ಕೂಡ ದಾಖಲಾಗಿತ್ತು.
ಆದರೆ ಇಂದು ಅಕ್ಟೋಬರ್ 11ರಂದು ಮುಂಜಾನೆ ಕೆರೆಯಲ್ಲಿ ನಿಶ್ಮಿತಾರವರ ಮೃತದೇಹವು ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿಯೇ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಕೂಡ ಉಲ್ಲೇಖವಿದೆ ಎನ್ನಲಾಗಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣವು ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಈಕೆ ಶರಣಾಗಿದ್ದಾರೆ ಎಂಬ ಕುರಿತು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ ಎನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.