



ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಯುವತಿ ಯೊಬ್ಬರಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಜ.18 ರಂದು ನಡೆದಿದೆ.ತೆಳ್ಳಾರ್ ನಿವಾಸಿ ಪ್ರೀತಿಕಾ (34) ಆತ್ಮಹತ್ಯೆ ಮಾಡಿಕೊಂಡವರು.ಪ್ರೀತಿಕಾ 7 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಿಂದ ಔಷಧಿ ಪಡೆಯುತ್ತಿದ್ದರೂ ಗುಣಮುಖವಾಗದೇ ಇದ್ದು ಮನೆಯಲ್ಲಿ ಎಲ್ಲರಿಗೂ ತೊಂದರೆ ನೀಡುತ್ತಿದ್ದರು.
ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲು ಇರುವುದರಿಂದ ಈಕೆಯನ್ನುಕಾರ್ಕಳದ ಆಶ್ರಮವೊಂದರಲ್ಲಿ ಸೇರಿಸಿದ್ದು, ಮಾನಸಿಕ ಕಾಯಿಲೆ ಹೆಚ್ಚಾಗಿರುವುದರಿಂದ ಮನನೊಂದು ಆಶ್ರಮದ ಒಳಗೆ ಇರುವ ಟಾಯ್ಲೆಟ್ ಬಳಿ ಚೂಡಿದಾರ್ ಶಾಲಿನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ:
ಅಂಗಾಂಗ ದಾನದಲ್ಲಿ ಕರ್ನಾಟಕ ನಂ 2ನೆ ಸ್ಥಾನ ಬೆಂಗಳೂರು: ಕರ್ನಾಟಕದಲ್ಲಿ ಅಂಗಾಂಗ ದಾನಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಮೂಲಕ ದೇಶದಲ್ಲಿಯೇ ಅಂಗಾಂಗ ದಾನಿಗಳ ಸಂಖ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದುಕೊಂಡಿದೆ.ಬರೋ ಬರೋಬ್ಬರಿ 151 ಮಂದಿ ಅಂಗಾಂಗ ದಾನ ಮಾಡಿರುವುದಾಗಿ ತಿಳಿದು ಬಂದಿದೆ.ಕರ್ನಾಟಕದಲ್ಲಿ ಅಂಗಾಂಗ ದಾನ ಹೆಚ್ಚುವುದಕ್ಕೆ ನಟ ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ಪ್ರೇರಣೆಯಂತೆ. ಪುನೀತ್, ಸಂಚಾರಿ ವಿಜಯ್ ಅಂಗಾಂಗ ದಾನದ ಬಳಿಕ, ಹಲವು ಕುಟುಂಬಸ್ಥರು ಸ್ವಯಂ ಪ್ರೇರಿತವಾಗಿ ಮುಂದೆ ಬಂದು ಮೃತರ ಅಂಗಾಂಗ ದಾನ ಮಾಡುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.