



ನವದೆಹಲಿ: 10 ವರ್ಷಕ್ಕೂ ಹಳೆಯದಾದ ಆಧಾರ್ ಕಾರ್ಡ್‌ಗಳನ್ನು ಪರಿಷ್ಕರಣೆ ಅಥವಾ ಅಪ್‌ಡೇಟ್ ಮಾಡಲು ಕೇಂದ್ರ ಸರ್ಕಾರ ಸೂಚಿಸಿದ್ದು, ಜೂನ್ 14 ರವರೆಗೆ ಕಾಲಾವಕಾಶ ನೀಡಿತ್ತು. ಇದೀಗ ಗಡುವನ್ನು ಸೆಪ್ಟೆಂಬರ್ 14ರವರೆಗೆ ಮುಂದೂಡಿದೆ.
ಯಾರೆಲ್ಲ ಹತ್ತು ವರ್ಷಗಳ ಹಿಂದೆ ಆಧಾರ್ ಮಾಡಿಸಿದ್ದರೋ ಅವರು ಈ ಡೆಡ್‌ಲೈನ್ ಒಳಗೆ ಆಧಾರ್ ಕಾರ್ಡ್‌ನಲ್ಲಿ ನಿಮ್ಮ ವಿಳಾಸ, ಹೆಸರು ಮತ್ತು ಇತರ ಮಾಹಿತಿಗಳನ್ನು ಅಪ್ ಡೇಟ್ ಮಾಡುವುದು ಕಡ್ಡಾಯವಾಗಿರುತ್ತದೆ. ಗಡುವು ಮುಗಿದ ಬಳಿಕ ಸರ್ಕಾರ ದಂಡ ವಿಧಿಸುವ ಸಾಧ್ಯತೆಗಳಿದೆ.
ಆಧಾರ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಉಚಿತವಾಗಿ ಅಪ್ ಡೇಟ್ ಮಾಡಲು ಅವಕಾಶವಿದ್ದು, ಎಲ್ಲರೂ ಪರಿಷ್ಕರಣೆ ಮಾಡುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. https://myaadhaar.uidai.gov.in
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.