logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಕಾರ್ಯಾಚರಣೆ

ಟ್ರೆಂಡಿಂಗ್
share whatsappshare facebookshare telegram
24 Nov 2021
post image

ಬೆಂಗಳೂರು: , ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಪರಿಶೀಲನೆ ಮಾಡುತ್ತಿದ್ದಾರೆ. ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ. ಮಸ್ತಿ ತಂಡದಿಂದ ದಾಳಿ ನಡೆದಿದೆ.ಲೋಕೋಪಯೋಗಿ ಇಲಾಖೆಯ ಜೆ.ಇ. ಶಾಂತಗೌಡ ಬಿರಾದಾರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದಾರ್ ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು, ಜೆ.ಇ. ಶಾಂತಗೌಡ ಬಿರಾದಾರ್‌ಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.