



ಮಂಗಳೂರು:ಲಂಚ ಪಡೆಯುತ್ತಿದ್ದಾಗ ಸರಕಾರಿ ಅಧಿಕಾರಿಗಳು ಸಿಕ್ಕಿ ಬಿದ್ದಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ಇಲ್ಲೊಬ್ಬ ಶಾಲಾ ಸಂಚಾಲಕಿಯೇ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಇದೆಲ್ಲ ನಡೆದಿರುವುದು ನಮ್ಮೂರಿನಲ್ಲಿಯೇ. ಮಂಗಳೂರು ಹೊರವಲಯದ ಬಜಪೆ ಸಮೀಪದ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತಿಯಾಗುತ್ತಿರುವ ಶಿಕ್ಷಕಿ ಶೋಭಾರಾಣಿ ಅವರ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಇಂದು 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಶಾಲಾ ಸಂಚಾಲಕಿಯನ್ನು ಜ್ಯೋತಿ ಪೂಜಾರಿ ಅವರನ್ನು ಬಂಧಿಸಿದ್ದಾರೆ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಜ್ಯೋತಿ ಪೂಜಾರಿ ಬಂಧನಕ್ಕೀಡಾಗಿದ್ದಾರೆ. ಲೋಕಾಯಯಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್ ಹಾಗೂ ಕಲಾವತಿ, ಇನ್ಸೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.