logo
WhatsApp Image 2026-04-02 at 14.46.04.jpeg
hindalco everlast.jpeg

ಗಣೇಶನ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು..!

ಟ್ರೆಂಡಿಂಗ್
share whatsappshare facebookshare telegram
7 Sept 2024
post image

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಹತ್ತಿರ ಗಣೇಶ ಮೂರ್ತಿ ತರಲು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಒಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಇನ್ನು ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆಯು ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.