



ಉಡುಪಿ, : ಮಸೀದಿಗೆ ಅಕ್ರಮ ಪ್ರವೇಶ ಮಾಡಿ, ಮಸೀದಿಯ ಕಿಟಕಿಗೆ ಹಾನಿ ಮಾಡಿ, ಕೋಮು ಸಾಮರಸ್ಯಕ್ಕೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಜನವರಿ 29 ರಂದು ಉಡುಪಿ ಪುತ್ತೂರಿನ ಕೊಡಂಕೂರು ಗ್ರಾಮದ ನಿವಾಸಿ ಅಂಕಿತ್ ಕುಂಪಲ ಎಂಬಾತನು, ನಗರದ ಅಂಬಲಪಾಡಿ ಗ್ರಾಮದ ಆದಿ ಉಡುಪಿಯ ಮಸ್ಜಿದ್ ಇ ನುರ್‌ವುಲ್ಲಾ ಇಸ್ಲಾಂ ಮಸೀದಿಗೆ ಅಕ್ರಮ ಪ್ರವೇಶ ಮಾಡಿ, ಮಸೀದಿಯ ಕಿಟಕಿಯ ಗಾಜನ್ನು ಪುಡಿ ಮಾಡಿ, ನಷ್ಟ ಉಂಟುಮಾಡಿದ್ದಲ್ಲದೇ, ಮುಸ್ಲಿಂರ ಪ್ರಾರ್ಥನಾ ಸ್ಥಳವಾದ ಮಸೀದಿಗೆ ಕಲ್ಲು ಹೊಡೆದು ಕೋಮುಗಳ ಮಧ್ಯೆ ವೈಶಮ್ಯವನ್ನುಂಟು ಮಾಡಿ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಶಾಂತಿಗೆ ಭಂಗವನ್ನುAಟು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ರವರು ಆರೋಪಿ ಅಂಕಿತ್ ಕುಂಪಲ ಗೆ 3 ವರ್ಷದ ಕಾರಾಗೃಹ ವಾಸ ಶಿಕ್ಷೆ ಹಾಗೂ 10000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ. ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.