



ಪುತ್ತೂರು ತಾಲೂಕಿನ ಪುರುಷಕಟ್ಟೆಯಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆದಿದೆ. ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂಬವರಿಗೆ ಹಲ್ಲೆ ನಡೆಸಲಾಗಿದೆ.
ಇದರ ಜೊತೆಗೆ ಪುರುಷರಕಟ್ಟೆ ಭಾಗದಲ್ಲಿ ಕೆಲ ಬಿಜೆಪಿ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರಿಂದ ಪುರುಷರಕಟ್ಟೆ ಸಮೀಪದ ಇಂದ್ರನಗರ ರಕ್ತೇಶ್ವರಿಕಟ್ಟೆ ನಿವಾಸಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಮನೆಗೆ ನುಗ್ಗಿ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾಗಿರುವ ಪ್ರವೀಣ್ ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.