



ಉಡುಪಿ:
ದ.ಕ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬೈಂದೂರಿನ ವ್ಯಕ್ತಿಯೋರ್ವರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಬೆಳ್ಳಾರೆಯ ಕೊಲೆಯಾಗಿ ಮೃತಪಟ್ಟಿರುವ ಯುವಕನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ ಬರಹವನ್ನು ಬರೆದು ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ವ್ಯಕ್ತಿಯೋರ್ವನ ಹತ್ಯೆ ಯ. ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಅನ್ವಯ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.