



ಉಡುಪಿ: ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ , ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು ಮತ್ತು ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ ಪ್ರಯತ್ನಿಸುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಹ ಬಸ್ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.