



ಬೆಂಗಳೂರು: 108 ಆರೋಗ್ಯ ಸೇವೆಯನ್ನ ಬರುವ ಮೂರು ತಿಂಗಳೊಳಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ 108 ಸೇವೆ ಕುರಿತಂತೆ ಆರೋಗ್ಯ ಸೌಧದಲ್ಲಿ (Arogya Soudha) ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, 108 ಸಮರ್ಪಕವಾಗಿ ಜನರಿಗೆ ದೊರಕುವಂತೆ ನಿಟ್ಟಿನಲ್ಲಿ ಇರುವ ಸಮಸ್ಯೆಗಳನ್ನ ಬಗೆಹರಿಸುವ ಕುರಿತಂತೆ ಚರ್ಚೆ ನಡೆಸಿದರು.
ಕಾಲ್ ಸೆಂಟರ್ ನ ತಂತ್ರಜ್ಞಾನ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದ ಸಚಿವರು, ತಂತ್ರಜ್ಞಾನದಲ್ಲಿ ಬದಲಾವಣೆ ತರುವಂತೆ ಸೂಚಿಸಿದರು. 108 ಸೇವೆ ಪಡೆಯಲು ಸಾರ್ವಜನಿಕರ ಕರೆಗಳಿಗೆ ಸೂಕ್ತ ಸ್ಪಂದನೆ ಏಕೆ ಸಿಗುತ್ತಿಲ್ಲ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಗುಂಡೂರಾವ್, ಅತಿ ಶೀಘ್ರದಲ್ಲಿ ಸಮಸ್ಯೆಗಳನ್ನ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.