



ನವದೆಹಲಿ: ಕೊರೊನ ಲಾಕ್ಡೌನ್ ವಿತರಿಸಲಾಗುತಿದ್ದ ಉಚಿತ ಪಡಿತರ ನಿಲ್ಲಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸರಕಾರ ನವೆಂಬರ್ 30 ರ ಬಳಿಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ..
ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಲ್ಲಿ ದೇಶದ 80 ಕೋಟಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಆರ್ಥಿಕತೆಯಲ್ಲಿ ಚೇತರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 30ರ ನಂತರ ಉಚಿತ ಪಡಿತರವನ್ನು ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ
ಕೋವಿಡ್-19 ನಿಂದ ಉಂಟಾದ ತೊಂದರೆ ನಿವಾರಿಸಲು PMGKAY ಅನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು. ಆರಂಭದಲ್ಲಿ, ಈ ಯೋಜನೆಯನ್ನು ಏಪ್ರಿಲ್-ಜೂನ್ 2020 ಅವಧಿಗೆ ಪ್ರಾರಂಭಿಸಲಾಗಿತ್ತು. ಆದರೆ ನಂತರ ಅದನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.