



ಬೆಂಗಳೂರು: ಮ್ಯಾಂಡಸ್ ಬಳಿಕ ಮತ್ತೊಂದು ಸೈಕ್ಲೋನ್ ರೂಪುಗೊಳ್ಳುತ್ತಿದೆ. ಈ ಚಂಡಮಾರುತವು ಭಾರತದ ಕರಾವಳಿಯಿಂದ ಪಶ್ಚಿಮ- ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸೈಕ್ಲೊನ್ ಅಪ್ಪಳಿಸಿದಲ್ಲಿ ಡಿಸೆಂಬರ್ 14 ಮತ್ತು 15ರಂದು ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಭಾರೀ ಮಳೆಯಲಾಗಲಿದೆ.ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ದಲ್ಲಿ ಮಳೆ ಮುಂದುವರೆದಿದೆ. ಇಂದು ಮತ್ತು ನಾಳೆ ಆಗ್ನೇಯ ಮತ್ತು ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಮತ್ತು ಕೇರಳ- ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕೀ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಇಂದು ಮತ್ತು ನಾಳೆ ಆಗ್ನೇಯ ಮತ್ತು ಪೂರ್ವ ಮಧ್ಯ ಅರೇಬಿಯನ್, ಕೇರಳ- ಕರ್ನಾಟಕ ಕರಾವಳಿಯ ಉದ್ದಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.