logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ ತಾಲೂಕು ರಚನೆಯಾದ ಬಳಿಕ ತಾಲೂಕು ಮಟ್ಟದ ಪೂರ್ಣ ಪ್ರಮಾಣದ ಎಲ್ಲಾ ಕಛೇರಿಗಳು ಸ್ವಂತ ಕಟ್ಟಡಕ್ಕೆ ಮರಳುತ್ತಿವೆ . ಸಚಿವ ವಿ ಸುನೀಲ್ ಕುಮಾರ್

ಟ್ರೆಂಡಿಂಗ್
share whatsappshare facebookshare telegram
12 Feb 2022
post image

ಕಾರ್ಕಳ : ಹೆಬ್ರಿ ತಾಲೂಕು ರಚನೆಯಾದ ಬಳಿಕ ತಾಲೂಕು ಮಟ್ಟದ ಪೂರ್ಣ ಪ್ರಮಾಣದ ಎಲ್ಲಾ ಕಛೇರಿಗಳು ಸ್ವಂತ ಕಟ್ಟಡಕ್ಕೆ ಮರಳುತ್ತಿವೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು .ಹೆಬ್ರಿಯ ರಿಂಗ್ ರಸ್ತೆಯ ಬಳಿ ೨.೩೮ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹೆಬ್ರಿ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಚಿವರು ರಾಷ್ಟ್ರೀಯ ಹೆದ್ದಾರಿ ಸಹಿತ ಹಲವು ಸಮಸ್ಯೆಯಿಂದಾಗಿ ಹೆಬ್ರಿ ಪೇಟೆಯ ನಡುವೆ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸುವ ಅನಿವಾರ್ಯತೆ ಇದ್ದು, ವಿಶಾಲ ಜಾಗದಲ್ಲಿ ಸಕಲ ವ್ಯವಸ್ಥೆಯೊಂದಿಗೆ ನೂತನ ಠಾಣೆಯು ಶೀಘ್ರದಲ್ಲೇ ನಿರ್ಮಾಣವಾಗಲಿದೆ, ಹೆಬ್ರಿ ಹೊಸ ತಾಲ್ಲೂಕಿನ ಎಲ್ಲಾ ಅವಶ್ಯಕತೆಗಳನ್ನು ಆದ್ಯತೆ ನೀಡಿ ಮಾಡಲಾಗುತ್ತಿದೆ ಎಂದರು. ತಾ.ಪA ಗೆ ಹೊಸ ಕಟ್ಟಡ : ಹೆಬ್ರಿ ತಾಲ್ಲೂಕಿನಲ್ಲಿ ಅಭಿವೃದ್ದಿ ಕಾಮಗಾರಿಗಳು ವೇಗ ಪಡೆಯುತಿದ್ದು ತಾಲೂಕು ಪಂಚಾಯಿತಿಗೆ ನೂತನ ಕಟ್ಟಡ ನಿರ್ಮಾಣ ಮಾಡಲಾಗುವುದು ಸಚಿವ ಸುನಿಲ್ ಕುಮಾರ್ ಹೇಳಿದರು. ಸಮಾರಂಭದಲ್ಲಿ ಹೆಬ್ರಿ ಪಂಚಾಯಿತಿ ಅಧ್ಯಕ್ಷೆ ಮಾಲತಿ, , ಮೆಸ್ಕಾಂ ನಿರ್ದೇಶಕ ಮುನಿಯಾಲು ದಿನೇಶ ಪೈ, ಉಡುಪಿ ಎಸ್‌ಪಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು, ಹೆಬ್ರಿ ತಹಶೀಲ್ಧಾರ್ ಪುರಂದರ್ ಕೆ, ಹೆಬ್ರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕೆಜಿ, ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್, ಸರ್ಕಲ್ ಇನ್ ಫೆಕ್ಟರ್ ಸಂಪತ್ ಕುಮಾರ್, ಹೆಬ್ರಿ ಸಬ್ ಇನ್ ಫೆಕ್ಟರ್ ಮಹೇಶ್ ಮತ್ತಿತರರು ಭಾಗವಹಿಸಿದ್ದರು. ಎಚ್. ಗುರುದಾಸ ಶೆಣೈ ನಿರೂಪಿಸಿ ಸ್ವಾಗತಿಸಿದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.