



ನವದೆಹಲಿ: ಕೇಂದ್ರ ಸರ್ಕಾರ ತಂದಿರುವ ‘ಅಗ್ನಿಪಥ್’ ಯೋಜನೆ ವಿರೋಧಿಸಿ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆಯಲ್ಲಿ 491 ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಲ್ಲಿ 229 ಎಕ್ಸ್‌ಪ್ರೆಸ್ ಮತ್ತು 254 ಪ್ಯಾಸೆಂಜರ್ ರೈಲುಗಳು ಸೇರಿವೆರೈಲುಗಳು ರದ್ದಾದ ಹಿನ್ನೆ ದೆಹಲಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ದೆಹಲಿ-ಗುರುಗ್ರಾಮ್ ಎಕ್ಸ್ ಪ್ರೆಸ್ ವೇನ ಸರ್ಹೌಲ್ ಗಡಿ, ನೋಯ್ಡಾ-ದೆಹಲಿ ರಸ್ತೆ ಸೇರಿದಂತೆ ಹಲವೆಡೆ ಭಾರೀ ಟ್ರಾಫಿಕ್‌ನಿಂದಾಗಿ ಪ್ರಯಾಣಿಕರು ವಾಹನ ಸವಾರರು ಪರದಾಡುವಂತಾಗಿದೆ
ಪ್ರಸ್ತುತ 9 ಮತ್ತು 11ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬಿಹಾರ ಸರ್ಕಾರವು ಸುಮಾರು 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಅದೇ ರೀತಿ ಪಂಜಾಬ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಜೈಪುರ ಮತ್ತು ನೋಯ್ಡಾದಲ್ಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.