



ಬೆಂಗಳೂರು: ಬೆಂಗಳೂರು ಎಚ್‌ಕ್ಯೂ ಆಶ್ರಯದಲ್ಲಿ ಹಾಸನದ ಜಿಲ್ಲಾ ಕ್ರೀಡಾ ಕ್ರೀಡಾಂಗಣದಲ್ಲಿ ಆಗಸ್ಟ್ 10ರಿಂದ 22ರವರೆಗೆ ಬೆಂಗಳೂರು ವಲಯದ 14 ಜಿಲ್ಲೆಗಳ ಅಗ್ನಿಪಥ್ ನೇಮಕಾತಿ ರ್ಯಾಲಿ ನಡೆಯಲಿದೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳ ಪುರುಷ ಅಭ್ಯರ್ಥಿಗಳಿಗಾಗಿ ಅಗ್ನಿಪಥ್ ನೇಮಕಾತಿ ರ್ಯಾಲಿ ನಡೆಯಲಿದೆ.
ಸೇನೆಯಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮೆನ್ 10ನೇ ಪಾಸ್, ಅಗ್ನಿವೀರ್ ಟ್ರೇಡ್ಸ್‌ಮೆನ್ 8ನೇ ಪಾಸ್ ಮತ್ತು ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್ ವಿಭಾಗಗಳ ಹುದ್ದೆಗಳಿಗಾಗಿ ನೇಮಕಾತಿ ರ್ಯಾಲಿಯನ್ನು ನಡೆಸಲಾಗುತ್ತಿದೆ. ಶುಕ್ರವಾರ ಬೆಂಗಳೂರು ನೇಮಕಾತಿ ಕಚೇರಿ ಪ್ರಕಟಿಸಿದ ಅಧಿಸೂಚನೆಯಲ್ಲಿ ಸೇನೆಯಲ್ಲಿ ನಿಗದಿತ ವಿಭಾಗಗಳಲ್ಲಿ ದಾಖಲಾತಿಗಾಗಿ ವಯಸ್ಸು, ಶಿಕ್ಷಣ ಅರ್ಹತೆ ಮತ್ತು ಇತರ ಮಾನದಂಡಗಳ ವಿವರಗಳನ್ನು ನೀಡಲಾಗಿದೆ.
ಅಗ್ನಿವೀರ್ ಆನ್ಲೈನ್ ನೋಂದಣಿ ಜು.30 ರವರೆಗೆ ತೆರೆದಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ Joinindianarmy.nic.in ವೆಬ್‌ಸೈಟ್‌ನಲ್ಲಿ ಆನ್ಲೈನ್ ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿತ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಆಗಸ್ಟ್ 1ರಿಂದ 7ರವರೆಗೆ ಅವರ ನೋಂದಾಯಿತ ಇ-ಮೇಲ್‌ಗೆ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.