



ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಕೆ-ಕಿಸಾನ್ ಪೋರ್ಟಲ್‌ನಡಿ ಆರ್.ಎಸ್.ಕೆ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಯನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪ್ ರೈಥ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.