logo
WhatsApp Image 2026-04-02 at 14.46.04.jpeg
hindalco everlast.jpeg

ಅ.22ರಂದು ಬ್ರಹ್ಮಾವರದಲ್ಲಿ ಕೃಷಿ ಮಹೋತ್ಸವ ಕಾರ್ಯಕ್ರಮ: ನಗರದಲ್ಲಿ ಡಾ. ಲಕ್ಷ್ಮಣ್ ಮಾಹಿತಿ

ಟ್ರೆಂಡಿಂಗ್
share whatsappshare facebookshare telegram
19 Oct 2022
post image

ಬ್ರಹ್ಮಾವರ : ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಇದೇ ಬರುವ ಅಕ್ಟೋಬರ್ 22ರಂದು 10ಗಂಟೆಗೆ ಕೃಷಿ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್ ಅವರು, ಈ ಕಾರ್ಯಕ್ರಮವನ್ನು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಸಚಿವ ವಿ.ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ ಮೊದಲಾದವರು ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಧನಂಜಯ ಬಿ., ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ವಿ. ಸುಧೀರ್ ಕಾಮತ್ ಉಪಸ್ಥಿತರಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.