



ನವದೆಹಲಿ: ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ಹೊಸ ನಿಯಮವನ್ನು ಏರ್ ಇಂಡಿಯಾ ಜಾರಿಮಾಡಿದೆ. ಹೊಸ ನಿಯಮದ ಪ್ರಕಾರ ಕೂದಲು ಉದುರಿರುವ ಪುರುಷ ಸಿಬ್ಬಂದಿ ಸಂಪೂರ್ಣವಾಗಿ ತಲೆ ಕೂದಲನ್ನು ತೆಗೆಸಿಕೊಂಡು ಕೆಲಸಕ್ಕೆ ಬರುವಂತೆ ಸೂಚಿಸಿದೆ.
ಮಹಿಳಾ ಸಿಬ್ಬಂದಿ ಕೇವಲ ಚಿನ್ನ ಮತ್ತು ವಜ್ರದ ವೃತ್ತಾಕಾರದ ಕಿವಿ ಓಲೆಗಳನ್ನು ಮಾತ್ರ ಧರಿಸಬೇಕು. 0.5 ಸೆಂ.ಮೀ. ಅಗಲದ ಬಿಂದಿ ಮತ್ತು 1 ಸೆಂ.ಮೀ. ಗಿಂತ ಹೆಚ್ಚು ಅಗಲವಿಲ್ಲದ ಉಂಗುರ ಧರಿಸಬೇಕು. 1 ಕೈಗೆ 1 ಉಂಗುರ ಮಾತ್ರ ಧರಿಸಬೇಕು. ಡಿಸೈನ್‌ಗಳಿಲ್ಲದ 1 ಬಳೆ ಮಾತ್ರ ಧರಿಸಬೇಕು ಎಂದು ತನ್ನ ಸಿಬ್ಬಂದಿಗೆ ಸೂಚಿಸಿದೆ.
. ತಲೆಯಲ್ಲಿ ಹೆಚ್ಚು ಕೂದಲು ಉದುರಿ ತಲೆ ಬೋಳು-ಬೋಳಾಗಿ ಕಾಣುವ ಸಿಬ್ಬಂದಿ ಪೂರ್ಣವಾಗಿ ತಮ್ಮ ತಲೆಕೂದಲನ್ನು ಪ್ರತಿನಿತ್ಯ ಶೇವ್ ಮಾಡಬೇಕು. ಅಲ್ಲದೇ ಗುಂಪಿನಲ್ಲಿದ್ದಾಗ ಅಸಭ್ಯ ವರ್ತನೆ ನಿಲ್ಲಿಸಬೇಕು ಎಂದು ಸೂಚಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.