



ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಮಂಗಳವಾರ ನಡೆಯಿತು.
ನೂತನ ರಥ ಸಮರ್ಪಣೆ ಬಳಿಕ ದೇವಸ್ಥಾನದಲ್ಲಿ ಆಶ್ಲೇಷಾ ಬಲಿ, ಚಂಡಿಕಾಯಾಗ, ರಂಗಪೂಜೆ,ಗಣಹೋಮ ಸಹಿತ ಧಾರ್ಮಿಕ ವಿಧಿವಿಧಾನಗಳು ವೇ.ಮೂ ಕೊರಂಗ್ರಪಾಡಿ ವಾದಿರಾಜ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೆಂಕಟರಮಣ ಭಟ್ ಪೌರೋಹಿತ್ಯದಲ್ಲಿ ನೆರವೇರಿತು. ಮಂಗಳವಾರ ರಾತ್ರಿ ರಥೋತ್ಸವ,ಕೆರೆದೀಪ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಿವರಾಮ ಜಿ.ಶೆಟ್ಟಿ, ಕಾರ್ಯದರ್ಶಿ ಭಾಸ್ಕರ ಶೆಟ್ಟಿ ಕುಂಟಿನಿ, ಕೋಶಾಧಿಕಾರಿ ಜಯಕರ ಶೆಟ್ಟಿ, ವಿಜಯ ಶೆಟ್ಟಿ, ಹರೀಶ್ ನಾಯಕ್,ಸಾಧು ಶೆಟ್ಟಿ ಕೆಂಜಿಲ, ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.