logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ವಾಯುಭಾರ ಕುಸಿತ ರಾಜ್ಯದಲ್ಲಿ ಮತ್ತೆ ಎಲ್ಲೋ ಎಲರ್ಟ್ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
8 Nov 2021
post image

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ಪ್ರಬಲ ವಾಯುಭಾರ ಕುಸಿತದಿಂದಾಗಿ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ನ.8 ಮತ್ತು 9ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾ‍ಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೊ ಅಲರ್ಟ್‌' ಘೋಷಿಸಲಾಗಿದೆ.

ಮಳೆ-ಎಲ್ಲಿ, ಎಷ್ಟು?: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಭಾನುವಾರ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸುಳ್ಯ 7, ಪುತ್ತೂರು, ಚಾಮರಾಜನಗರ, ಮಡಿಕೇರಿ 5, ಕಾರ್ಕಳ 3, ಮಂಗಳೂರು, ಸಕಲೇಶಪುರ 2, ಮಂಗಳೂರು, ಕುಂದಾಪುರ, ಕಳಸದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.