



ಉಡುಪಿ: ಶ್ರೀಕೃಷ್ಣ ಮಠದಲ್ಲಿ ಜರಗುವ ಪ್ರಸಕ್ತ ಸಾಲಿನ ಪರ್ಯಾಯ ಮಹೋತ್ಸವದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊ೦ದಿಗೆ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕೊಠಡಿಗಳನ್ನು ಕಾಯ್ದಿರಿಸಿ, ಸ್ವಚ್ಛತೆ, ಸುರಕ್ಷತೆ ಕಾಪಾಡುವುದರೊಂದಿಗೆ ಜಿಲ್ಲೆಯ ಪ್ರಸಿದ್ಧ ಊಟ ಉಪಹಾರಗಳನ್ನು ಒದಗಿಸಿ, ಬರುವಂತ ಪ್ರವಾಸಿಗರನ್ನು ಸತ್ಕರಿಸಿ ಶ್ರೀ ಕೃಷ್ಣ ಮಠದ ಪರ್ಯಾಯೋತ್ಸವಕ್ಕೆ ಮೆರಗನ್ನು ಒದಗಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.