



ನವದೆಹಲಿ: ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟವು ತಿಂಗಳ ಎಲ್ಲಾ ಶನಿವಾರ ರಜೆಯಾಗಿ ಘೋಷಿಸಲು ಒಪ್ಪಿಗೆ ನೀಡಿದೆ. ಆದರೆ, ಇದಕ್ಕೆ ಸರ್ಕಾರದ ಒಪ್ಪಿಗೆ ಹಾಗೂ ಅಧಿಸೂಚನೆಯ ಅಗತ್ಯವಿದೆ ಎಂದು ಒಕ್ಕೂಟ ತಿಳಿಸಿದೆ.
ಪರಿಷ್ಕೃತ ಕೆಲಸದ ಸಮಯವು ಸರ್ಕಾರದ ಅಧಿಸೂಚನೆಯ ನಂತರ ಜಾರಿಗೆ ಬರಲಿದೆ ಎಂದು ಒಕ್ಕೂಟ ಹೇಳಿದೆ. ಅಲ್ಲದೆ, ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶೇ.17ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿವೆ. ಈ ಕ್ರಮದಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ವಾರ್ಷಿಕವಾಗಿ ಸುಮಾರು 8,284 ಕೋಟಿ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಬೇಕಿರುತ್ತದೆ. 8 ಲಕ್ಷ ಬ್ಯಾಂಕ್ ಉದ್ಯೋಗಿಗಳು ವೇತನ ಹೆಚ್ಚಳದಿಂದ ಪ್ರಯೋಜನ ಪಡೆಯಲಿದ್ದಾರೆ.
ನವೆಂಬರ್ 2022ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ. ವೇತನ ಹೆಚ್ಚಳ ಜತೆಗೆ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವೈದ್ಯಕೀಯ ಪ್ರಮಾಣಪತ್ರ ನೀಡದೆ ತಿಂಗಳಿಗೆ ಒಂದು ದಿನ ಅನಾರೋಗ್ಯ ರಜೆ ತೆಗೆದುಕೊಳ್ಳಲು ಅನುಮತಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.