



ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಮಣಿಪಾಲ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳು ಒಂದು ತಿಂಗಳ ಅವಧಿಗೆ ಅಮಾನತು ಆಗಿದ್ದಾರೆ. ಈ ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಾಹೆ ವಿದ್ಯಾಸಂಸ್ಥೆ ಕಠಿಣ ಕ್ರಮ ಕೈಗೊಂಡಿದೆ. ಈ ಹಿಂದೆ ಮಾದಕ ವಸ್ತು ಸೇವಿಸಿ ಸಿಕ್ಕಿಬಿದ್ದ ವಿದ್ಯಾರ್ಥಿಗಳು, ಎರಡ್ಮೂರು ದಿನಗಳಲ್ಲಿ ಜಾಮೀನಿನ ಬಿಡುಗಡೆಯಾಗಿ ಹೊರಬರುತ್ತಿದ್ದರು. ಬಳಿಕ ಮತ್ತೆ ಅದೇ ಕೃತ್ಯದಲ್ಲಿ ಭಾಗಿಯಾಗುತ್ತಿದ್ದರು. ಇದನ್ನು ತಡೆಗಟ್ಟುವ ಉದ್ದೇಶದಿಂದ ಮಾಹೆ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಸಮಾಲೋಚನೆ ನಡೆಸಿ, ಅಮಾನತು ಮಾಡುವ ದಿಟ್ಟ ನಿರ್ಧಾರವನ್ನು ಕೈಗೊಂಡಿತ್ತು. ಅದರಂತೆ ಇದೀಗ 42 ವಿದ್ಯಾರ್ಥಿಗಳು ಒಂದು ತಿಂಗಳ ಮಟ್ಟಿಗೆ ಅಮಾನತು ಗೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.