



ಹೈದರಾಬಾದ್: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ಗೋವಾದಲ್ಲಿ ಬಂಧಿಸಲಾಗಿದೆ.
21 ವರ್ಷದ ನೃತ್ಯ ಸಂಯೋಜಕಿಯೊಬ್ಬರಿಗೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದು, ಯುವತಿಯ ದೂರಿನ ನಂತರ ಜಾನಿ ಮಾಸ್ಟರ್ ತಲೆಮರೆಸಿಕೊಂಡಿದ್ದರು.
ಜಾನಿ ಮಾಸ್ಟರ್ ಹೈದರಾಬಾದ್ ನಲ್ಲಿರುವ ಸ್ನೇಹಿತನ ಮನೆಯಲ್ಲಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ 4 ತಂಡಗಳನ್ನ ಮಾಡಿ ಪೊಲೀಸರು ಹುಡುಕಾಟ ನಡೆಸಿದ್ದರು. ಅಂತಿಮವಾಗಿ ಗೋವಾದಲ್ಲಿ ಜಾನಿ ಮಾಸ್ಟರ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದೇ ರೀತಿಯ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಜಾನಿ ಮಾಸ್ಟರ್ 6 ತಿಂಗಳ ಕಾಲ ಜೈಲು ಸೇರಿದ್ದರು. ಇದೀಗ ಮತ್ತೆ ಅದೇ ಛಾಳಿ ಮುಂದುವರಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.