



ಕೇರಳದಲ್ಲಿ ಕೃಷಿ ಬೆಳೆಗಳನ್ನು ನಾಶಗೊಳಿಸುವ ಕಾಡುಹಂದಿಗಳನ್ನು ಕೊಲ್ಲಲು ಸರಕಾರವು ಅನುಮತಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.ಆದರೆ ಹಂದಿಗಳನ್ನು ಕೊಲ್ಲಲು ಬಂದೂಕು ಪರವಾನಗಿ ಹೊಂದಿದವರು ಮತ್ತು ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ಅಧಿಕಾರಿಗಳಿಗೆ ಮಾತ್ರ ಅವಕಾಶವಿದೆ ಎಂದರು. ರಾಜ್ಯದಲ್ಲಿ ವನ್ಯಜೀವಿಗಳ ತೊಂದರೆಯನ್ನು ನಿಯಂತ್ರಿಸಲು 204 ಜನಜಾಗೃತಿ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ರೈತರಿಗೆ ಮತ್ತು ಕೃಷಿ ವಲಯಕ್ಕೆ ಮಾತ್ರವಲ್ಲದೆ ದಾರಿಹೋಕರಿಗೆ ಕೂಡ ಬೆದರಿಕೆಯನ್ನು ಒಡ್ಡುವುದರಿಂದ ಪರವಾನಗಿದಾರರಿಗೆ ಕಾಡುಹಂದಿಯನ್ನು ಹನನಗೊಳಿಸಲು ಅನುಮತಿ ನೀಡಲಾಗಿದೆ. ಜನರ ಜೀವಕ್ಕೇ ಮಾರಕವಾಗಿ ಪರಿಣಮಿಸಿರುವುದರಿಂದ ಕಾಡುಹಂದಿಗಳನ್ನು ಕೊಲ್ಲಲು ಒಪ್ಪಿಗೆ ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.