



ಹೈದರಾಬಾದ್: ಐತಿಹಾಸಿಕ ಉಡುಪಿ ಶ್ರೀಕೃಷ್ಣ ಮಠದ ಪುತ್ತಿಗೆ ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಆಂಧ್ರಪ್ರದೇಶದ ಲೇಪಾಕ್ಷಿ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಯಿತು. 2008-10ರಲ್ಲಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿಯವರ 3ನೇ ಪರ್ಯಾಯದ ಸಂದರ್ಭದಲ್ಲಿ ತಾವು ಉಡುಪಿಗೆ ಭೇಟಿ ನೀಡಿದ್ದನ್ನು ಪ್ರಧಾನಿ ಸ್ಮರಿಸಿಕೊಂಡರು ಮತ್ತು ಸ್ವಾಮೀಜಿಗಳಿಗೆ ತಮ್ಮ ನಮಸ್ಕಾರಗಳನ್ನು ತಿಳಿಸಿದರು. ಮಂಗಳವಾರದಂದು ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಮಠದ ಪರವಾಗಿ ಅವರಿಗೆ ಆಹ್ವಾನ ಪತ್ರಿಕೆಯನ್ನು ನೀಡಿ ಆಮಂತ್ರಿಸಲಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.