



ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫೆ.11 ರಂದು ತೆಂಕಿಲದಲ್ಲಿ ನಡೆಯಲಿರುವ ಸಮಾವೇಶಕ್ಕೆ ಆಗಮನದ ಪೂರ್ವಸಿದ್ಧತೆಯ ಕುರಿತು ವಿವಿಧ ಸಮಿತಿಗಳ ಪೂರ್ವಭಾವಿ ಸಭೆಯು ಫೆ. 4 ರಂದು ಅಪರಾಹ್ನ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆಯಿತು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಯಶಸ್ಸಿಗಾಗಿ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನು ಒಳಗೊಂಡ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು.
ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣಕುಮಾರ್ ಸಮಿತಿಗಳ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಮುರಳಿ ಕೃಷ್ಣ ಹಸಂತಡ್ಕ ,ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣ ಕುಮಾರ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾದ ಸತೀಶ್ಚಂದ್ರ, ಮೆಸ್ಕಾಂ ನ ನಿರ್ದೇಶಕರಾದ ಕಿಶೋರ್ ಬೊಟ್ಯಾಡಿ,ಅಪ್ಪಯ್ಯ ಮಣಿಯಾಣಿ,ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಶಿವಪ್ರಸಾದ್ ಇ..ಖಜಾಂಜಿ ಅಚ್ಯುತ ನಾಯಕ್, ವಿವೇಕಾನಂದ ಪ.ಪೂ.ಕಾಲೇಜಿನ ಅಧ್ಯಕ್ಷರಾದ ರವೀಂದ್ರ ರೈ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ರವಿನಾರಾಯಣ,ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ,ಬೂಡಿಯಾರು ರಾಧಾಕೃಷ್ಣ ರೈ, ನರೇಂದ್ರ ಪ.ಪೂ.ಕಾಲೇಜಿನ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ,ಸಂಚಾಲಕರಾದ ಸಂತೋಷ ಬಿ., ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.