



ಕಾರ್ಕಳ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ “ಅಮೃತ ಆವಿಷ್ಕಾರ” ನ್ಯೂ ಪ್ರೋಡಕ್ಟ್ ಲಾಂಚ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇಲ್ಲಿನ ವಾಣ ಜ್ಯ ವಿಭಾಗದ ಉಪನ್ಯಾಸಕರಾದ ವಿಜೇಂದ್ರ ಶೆಣೈ ಹೆಚ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ನಿಮಗೆ ವಿವಿಧ ರೀತಿಯ ಸದಾವಕಾಶಗಳು ಒದಗುತ್ತವೆ, ಅದನ್ನುಸದುಪಯೊಗಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳಲ್ಲಿ ಹುದುಗಿರುವ ವಿವಿಧ ಹೊಸ ಹೊಸ ಉಪಾಯಗಳನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ಸಹಾಯಕವಾಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ಕುಮಾರ್ ಹೆಗ್ಡೆಯವರು ವಹಿಸಿದ್ದರು. ವಿದ್ಯಾರ್ಥಿಗಳಾದ ತೇಜಸ್ ಕಾರ್ಯಕ್ರಮ ನಿರೂಪಿಸಿ, ತ್ರಿಶಾ ಸ್ವಾಗತಿಸಿ, ಜಾಹ್ನವಿ ಅತಿಥಿಗಳನ್ನು ಪರಿಚಯಿಸಿ, ಲಕ್ಷ್ಯ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.