



ನವದೆಹಲಿ:ಖಲಿಸ್ತಾನ್ ಉಗ್ರ ಅಮೃತಪಾಲ್ ಸಿಂಗ್ ಹರಿಯಾಣದಲ್ಲಿ ತಲೆಮರೆಸಿಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿವೆ.
ಜಿಲ್ಲಾ ಕೇಂದ್ರ ಕುರುಕ್ಷೇತ್ರದಲ್ಲಿ ಅಮೃತಪಾಲ್ ಸಿಂಗ್ ತನ್ನ ಮುಖವನ್ನು ಮರೆಮಾಚಲು ಛತ್ರಿ ಹಿಡಿದು ರಸ್ತೆಯಲ್ಲಿ ನಡೆದು ಹೋಗುತ್ತಿರುವ ದೃಶ್ಯವುಳ್ಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸಿಸಿಟವಿ ದೃಶ್ಯಾವಳಿಗಳನ್ನು ಆಧರಿಸಿ ಕುರುಕ್ಷೇತ್ರ ಸುತ್ತ ತೀವ್ರ ಕಾರ್ಯಾಚರಣೆ ನಡೆಸಿರುವ ಪಂಜಾಬ್- ಹರಿಯಾಣ ಪೊಲೀಸರು, ಅಮೃತಪಾಲ್ ಸಿಂಗ್‌ಗೆ ಮನೆಯಲ್ಲಿ ಆಶ್ರಯ ನೀಡಿದ್ದ ಆರೋಪದ ಮೇರೆಗೆ ಬಲ್ಜಿತ್ ಕೌರ್ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ಕುರುಕ್ಷೇತ್ರ ಜಿಲ್ಲೆಯ ಶಹಾಬಾದ್‌ನಲ್ಲಿ ಬಂಧಿಸಿ ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕುರುಕ್ಷೇತ್ರದ ಪೊಲೀಸ್ ವರಿಷ್ಠಾಧಿಕಾರಿ ಸುರೀಂದರ್ ಸಿಂಗ್ ಭೋರಿಯಾ ಮಾಹಿತಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.