



ಇತ್ತೀಚೆಗೆ ಬೆಲೆ ಏರಿಕೆ ಮಾಡಿದ್ದ ಅಮೂಲ್ ಹಾಗೂ ಮದರ್ ಡೈರಿ ಈಗ ಮತ್ತೆ ಪ್ರತಿ ಲೀಟರ್ ಹಾಲಿನಲ್ಲಿ ಎರಡು ರೂ. ಹೆಚ್ಚಿಸಿದ್ದು, ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ. ಅಮೂಲ್ ಗೋಲ್ಡ್ ಬೆಲೆ ಇದೀಗ ಪ್ರತಿ ಅರ್ಧ ಲೀಟರ್ಗೆ 31 ರೂ, ಅಮೂಲ್ ತಾಜಾ ಅರ್ಧ ಲೀಟರ್ಗೆ 25 ರೂ, ಹಾಗೂ ಅಮೂಲ್ ಶಕ್ತಿ ಅರ್ಧ ಲೀಟರ್ಗೆ 28 ರೂಪಾಯಿ ಆಗಲಿದೆ. ಎಂಆರ್ಪಿಯಲ್ಲಿ ಶೇ. 4ರಷ್ಟು ಜಾಸ್ತಿಯಾಗಿದೆ. ಸದ್ಯ ಟೋನ್ಡ್ ಹಾಲು ಪ್ರತಿ ಲೀಟರ್ಗೆ 51 ರೂ. ಇದ್ದು, ಡಬಲ್ ಟೋನ್ಡ್ ಹಾಲಿನ ದರ ಲೀಟರ್ಗೆ 45 ರೂ ಆಗಲಿದೆ. ಹಾಲಿನ ಉತ್ಪಾದನೆಯ ವೆಚ್ಚ ಹೆಚ್ಚಳವಾಗಿರುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಮೂಲ್ ಕಂಪನಿ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.