



ಉಡುಪಿ: ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ಕೈಹಾಕಿ ಚಿನ್ನದ ಸರವನ್ನು ಕದಿಯಲು ಯತ್ನಿಸಿರುವ ಘಟನೆ ಕೊರಂಗ್ರಪಾಡಿ ಗ್ರಾಮದ ಗ್ಯಾರೇಜ್ ಬಳಿ ಆ.11ರಂದು ನಡೆದಿದೆ. ಕೊರಂಗ್ರಪಾಡಿಯ ಪ್ರಜ್ಞಾ ಶೆಟ್ಟಿಗಾರ್ ಎಂಬ ವಿದ್ಯಾರ್ಥಿನಿ ಉಡುಪಿಯಲ್ಲಿ ಕಂಪ್ಯೂಟರ್ ತರಗತಿ ಮುಗಿಸಿಕೊಂಡು ವಾಪಾಸು ಮನೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಕೊರಂಗ್ರಪಾಡಿಯ ಗ್ಯಾರೇಜ್ ಬಳಿ ಬೈಕ್ ನಲ್ಲಿ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾಏಕಿ ಪ್ರಜ್ಞಾ ಅವರ ಎದುರು ಬಂದು ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಪ್ರಜ್ಞಾ ಅವರು ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿ ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.