


ಉಡುಪಿ: ಬಾವಿಗೆ ಹಾರಿ ಆಭರಣ ಮಳಿಗೆಯ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು, ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯ ಗರಡಿಮಜಲಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ. ಎರಡು ದಿನಗಳ ಹಿಂದೆ ಮೃತ ವ್ಯಕ್ತಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು, ಹುಡುಕಾಟ ನಡೆಯುತಿತ್ತು. ಪೋಲಿಸರು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಕೊಳೆಯಲು ಪ್ರಾರಂಭ ಪಡೆದ ಶವವನ್ನು ರಾತ್ರಿಯ ಸಮಯದಲ್ಲಿಯೇ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ ಮೇಲಕ್ಕೆತ್ತಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.