



ಬೆಂಗಳೂರು: ಕಾರಿನಲ್ಲಿ ಮಲಗಿದ್ದ ಭಿಕ್ಷುಕನೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾರಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಕಾರಿನ ಬಳಿಗೆ ಬಂದು ನೋಡಿದಾಗ ಕಾರಿನಲ್ಲಿ ವ್ಯಕ್ತಿ ಇರುವುದು ತಿಳಿದುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರ ಪರಿಶೀಲನೆ ಬಳಿಕ ಕಾರಿನಲ್ಲಿ ಭಿಕ್ಷುಕನೋರ್ವ ಮೃತಪಟ್ಟಿದ್ದು ತಿಳಿದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.