



ಕಾರ್ಕಳ: ಬೈಲೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ಥೀಂ ಪಾರ್ಕ್‍ಗೆ 1.50 ಕೋಟಿ ರೂ. ಬಿಡುಗಡೆಗೊಳಿಸಿ ಕಾರ್ಕಳದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ ಸಿಂಗ್ ಹೇಳಿದ್ದಾರೆ.
ಅವರು ಕಾರ್ಕಳ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. .
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣೀಕ್, ಕರ್ನಾಟಕ ಗಡಿ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಪುರಸಭೆ ಅಧ್ಯಕ್ಷೆ ಸುಮ ಕೇಶವ್, ಅರಣ್ಯ ಇಲಾಖಾಧಿಕಾರಿ ಮನೋಜ್ ಕುಮಾರ್, ಉದ್ಯಮಿ ಹುರ್ಲಾಡಿ ರಘುವೀರ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳ, ಜಿಲ್ಲಾಧಿಕಾರಿ ಕೂರ್ಮರಾವ್, ಜಿ.ಪಂ.ಸಿಇಒ ಡಾ.ನವೀನ್ ಭಟ್ ವೈ, ಎಸ್‍ಪಿ ಎನ್.ವಿಷ್ಣುವರ್ದನ್, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು ಉಪಸ್ಥಿತರಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸುಕೇಶ್ ಹೆಗ್ಡೆ ಕಡ್ತಲ ಅವರನ್ನು ಅಭಿನಂದಿಸಲಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.