



ನವದೆಹಲಿ: ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ವರದಿಯೊಂದನ್ನು ಹೊರಡಿಸಿದೆ. ಇದರ ಪ್ರಕಾರ ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ವರದಿಯ ಪ್ರಕಾರ ಭಾರತದಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ ಎಂಬುದರ ಉಲ್ಲೇಖವನ್ನು ಮಾಡಲಾಗಿದೆ.
ಇದರ ಅನುಸಾರ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಒಟ್ಟು 510 ಕೋಟಿ ರೂಪಾಯಿ ಆಸ್ತಿಯ ಮೌಲ್ಯವನ್ನು ಹೊಂದಿರುವ ಮೂಲಕ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಒಡಿಶಾ ಸಿಎಂ ನವೀನ್ ಪಟ್ನಾಯಕ್ 63 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ ಅವರು ಮೂರನೇ ಶ್ರೀಮಂತರಾಗಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 13 ನೇ ಸ್ಥಾನದಲ್ಲಿದ್ದಾರೆ. ಇವರ ಒಟ್ಟು ಆಸ್ತಿ 8 ಕೋಟಿ ರೂ.
ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ 15 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು. ಕೊನೆಯ ಸ್ಥಾನದಲ್ಲಿ ನಿಂತಿದ್ದಾರೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನಂತರ 1 ಕೋಟಿಗೂ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ಹೇಳಿದೆ.
ಎಡಿಆರ್, 28 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ (ಯುಟಿಗಳು) ದೆಹಲಿ ಮತ್ತು ಪುದುಚೇರಿ ಸೇರಿ ಎಲ್ಲಾ ಮುಖ್ಯಮಂತ್ರಿಗಳ ಸ್ವಯಂ-ಪ್ರಮಾಣ ಪತ್ರ, ಚುನಾವಣಾ ಅಫಿಡವಿಟ್‌ಗಳನ್ನು ಪರಿಶೀಲಿಸಲಾಗಿದೆ.
ಶೇ. 43 ರಷ್ಟು ಮುಖ್ಯಮಂತ್ರಿಗಳು ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.