



ಉಡುಪಿ,: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-2 ಹುದ್ದೆ ಮತ್ತು ಅಂಗನವಾಡಿ ಸಹಾಯಕಿಯರ-35 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಸ್ಥಳೀಯ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅಥವಾ ಉಡುಪಿ ದೂ.ಸಂಖ್ಯೆ: 0820-2524055, ಬ್ರಹ್ಮಾವರ ದೂ.ಸಂಖ್ಯೆ: 0820-2562244, ಕುಂದಾಪುರ ದೂ.ಸಂಖ್ಯೆ: 08254-230807 ಹಾಗೂ ಕಾರ್ಕಳ ದೂ.ಸಂಖ್ಯೆ: 08258-230992 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.